ರಾಹುಲ್ ರಾಜ್ಯ ಪ್ರವಾಸ ಹಠಾತ್ ರದ್ದು !

Kannada News

26-10-2017

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಲು ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 19ರಂದು ಎಐಸಿಸಿ ಪ್ರಮುಖರ ಸಭೆ ಆಯೋಜಿಸಲಾಗಿದ್ದು, ಅಂದು ರಾಹುಲ್ ಪಟ್ಟಕ್ಕೇರು ಸಾಧ್ಯತೆಗಳು ದಟ್ಟವಾಗಿವೆ. ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಸಮಾರಂಭದ ಹಿನ್ನೆಲೆ, ನ.19ರಿಂದ ಮೂರು ದಿನಗಳ ಕಾಲ ನಡೆಸಲು ಉದ್ದೇಶಿಸಿದ್ದ ರಾಜ್ಯ ಪ್ರವಾಸವನ್ನು ರಾಹುಲ್ ಗಾಂಧಿ ಹಠಾತ್ ರದ್ದುಪಡಿಸಿದ್ದಾರೆ.

ರಾಹುಲ್ ಗಾಂಧಿ ಈ ಮೊದಲು ನಿಗದಿಯಾದಂತೆ ನವೆಂಬರ್ 19ರಂದು ಚಿಕ್ಕಮಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ನ.20ರಂದು ಕಡೂರು ಮತ್ತು ಬೀರೂರಿನಲ್ಲಿ ರೋಡ್ ಶೋ ಹಾಗೂ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಅಲ್ಲದೇ ನ.21ರಂದು ಕುಮಟಾದಲ್ಲಿ ಮೀನುಗಾರರ ಸಮಾವೇಶ ಕೂಡ ಏರ್ಪಡಿಸಲಾಗಿತ್ತು. ಈ ಪ್ರವಾಸದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಪೂರ್ವಭಾವಿ ಸಭೆಗಳನ್ನು ನಡೆಸಿದ್ದರು. ಆದರೆ, ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ನಿರ್ಧರಿಸಿರುವುದರಿಂದ ಈ ಪ್ರವಾಸ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಶತಮಾನೋತ್ಸವ ಎಐಸಿಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ