‘ರಾಜ್ಯ ಸರ್ಕಾರ ದಿವಾಳಿಯಾಗಿದೆ’-ಬಿಎಸ್ ವೈ

Kannada News

26-10-2017

ಮೈಸೂರು: ಅಸಮರ್ಪಕ ಆಡಳಿತ ನಿರ್ವಹಣೆಯಿಂದಾಗಿ ರಾಜ್ಯದ  ಹಣಕಾಸು ಪರಿಸ್ಥಿತಿ ಅಧೋಗತಿಗೆ ಇಳಿದಿದೆ. ಸರ್ಕಾರಿ ನೌಕರರಿಗೆ ಸಂಬಳ ನೀಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪಾದಿಸಿದ್ದಾರೆ. ತಮಗೆ ಆರ್ಥಿಕತೆ ಬಗ್ಗೆ ನನಗೆ ಕನಿಷ್ಠ ಜ್ಞಾನವೂ ಇಲ್ಲವೆಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರ್ಥಿಕತೆಯ ಬೃಹಸ್ಪತಿಯೇ ಎಂದು ಪ್ರಶ್ನಿಸಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜಿನ ಮೈದಾನಲ್ಲಿ ನಡೆಯಲಿರುವ ರೈತ ಮೋರ್ಚಾ ಸಮಾವೇಶದ ಪೂರ್ವ ಸಿದ್ಧತೆ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಈ ಬಗ್ಗೆ ಜನರಿಗೆ ದಿಕ್ಕು ತಪ್ಪಿಸುತ್ತಿಸಲಾಗುತ್ತಿದೆ, ವಸ್ತು ಸ್ಥಿತಿ ತಿಳಿಸಲು ಶ್ವೇತಪತ್ರ ಹೊರಡಿಸುವಂತೆ ಸವಾಲು ಹಾಕಿದರು.

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿ 120 ದಿನ ಕಳೆಯಿತು. ಆದರೆ ರೈತರ ಖಾತೆಗೆ ಒಂದೇ ಒಂದು ರೂಪಾಯಿ ಜಮಾ ಆಗಿಲ್ಲ. ಈ ಪರಿಸ್ಥಿತಿ ನೋಡಿದರೆ ರಾಜ್ಯ ಸರ್ಕಾರ ಆರ್ಥಿಕತೆಯಲ್ಲಿ ದಿವಾಳಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಯಡಿಯೂರಪ್ಪ ಕುಟುಕಿದರು.

ಮೈಸೂರು ಮಿನರಲ್ಸ್ ಗೆ ಸೇರಿದ 1.400 ಕೋಟಿ ಹಣವನ್ನು ಅಪೆಕ್ಸ್ ಬ್ಯಾಂಕಿಗೆ ವರ್ಗಾಯಿಸಲು ಸರ್ಕಾರ ಸೂಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಎರಡು ಪತ್ರಗಳನ್ನು ಬರೆದರೂ, ಸಂಸ್ಥೆಯ ವ್ಯವಸ್ಥಾಪನ ಮಂಡಳಿ ಒಪ್ಪುತ್ತಿಲ್ಲ. ಇದು ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನು ತೋರಿಸುತ್ತದೆ ಎಂದು ಬಿಎಸ್‍ವೈ ವ್ಯಂಗ್ಯವಾಡಿದರು.


ಸಂಬಂಧಿತ ಟ್ಯಾಗ್ಗಳು

Kannada News Karnataka ಆರ್ಥಿಕತೆ ಬೃಹಸ್ಪತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ