ಗಂಡ-ಹೆಂಡತಿ ಜಗಳ ಆತ್ಮಹತ್ಯೆಯಲ್ಲಿ ಅಂತ್ಯ !

Kannada News

26-10-2017

ಬೆಂಗಳೂರು: ನಗರದ ರಾಮಮೂರ್ತಿ ನಗರದಲ್ಲಿ ನಿನ್ನೆ ರಾತ್ರಿ ಕೌಟುಂಬಿಕ ಕಲಹದ ಹಿನ್ನೆಲೆ, ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ರಾಮಮೂರ್ತಿನಗರದ ಮುನಿನಂಜಪ್ಪ ಕಾಲೋನಿಯ ಅನಿತಾ (23)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಏಳು ವರ್ಷಗಳ ಹಿಂದೆ ತರಕಾರಿ ವ್ಯಾಪಾರಿಯಾಗಿದ್ದ ಶಿವಕುಮಾರ್ (28) ನನ್ನು ವಿವಾಹವಾಗಿದ್ದ ಅನಿತಾಗೆ 3 ವರ್ಷದ ಹೆಣ್ಣು ಮಗಳಿದ್ದಾಳೆ. ವ್ಯಾಪಾರಲ್ಲಿನ ನಷ್ಟದಿಂದ ಇತ್ತೀಚಿಗೆ ಶಿವಕುಮಾರ್ ಪತ್ನಿ ಚಿನ್ನಾಭರಣಗಳನ್ನು ಅಡವಿಟ್ಟಿದ್ದರು, ಈ ವಿಚಾರವಾಗಿ ದಂಪತಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು, ಜಗಳದಿಂದ ನೊಂದ ಆಕೆ ರಾತ್ರಿ ಪತಿ ಬೇರೆ ಕೊಠಡಿಯಲ್ಲಿ ಮಲಗಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಳಿಗ್ಗೆ ಶಿವಕುಮಾರ್ ಎದ್ದು ನೋಡಿದಾಗ ಪತಿ ನೇಣುಬಿಗಿದುಕೊಂಡಿದ್ದರು, ವಿಷಯ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ರಾಮಮೂರ್ತಿನಗರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪತಿ ಮತ್ತು ಮಾವ ಜಯರಾಮ್ ನಾಯ್ಡುಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಿಂದ ಅನಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆಕೆಯ ಕುಟುಂಬಸ್ಥರು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಬಗ್ಗೆಯೂ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ