ಡಿಸಿ ಆದೇಶ: ಗ್ರಾಮ ಲೆಕ್ಕಿಗ ಅಮಾನತು

Kannada News

27-10-2017

ಮಂಡ್ಯ: ಅಕ್ರಮ ಮರಳುಗಾರಿಕೆ ಸಹಕರಿಸಿ ಅಧಿಕಾರ ದುರುಪಯೋಗ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ, ಮಂಡ್ಯಜಿಲ್ಲೆಯ ಮದ್ದೂರು ತಾಲ್ಲೂಕಿನ ರಾಜಸ್ವ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗರನ್ನು ಅಮಾನತು ಮಾಡಿ, ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಆದೇಶ ಹೊರಡಿಸಿದ್ದಾರೆ. ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಹೋಬಳಿ ಆರ್.ಐ ದೇವಪ್ಪ ಮತ್ತು ಕೊಳಗೆರೆ ವೃತ್ತದ ವಿ.ಎ ರಾಮಣ್ಣ ಅಮಾನತುಗೊಂಡ ಅಧಿಕಾರಿಗಳು.

ಶಿಂಷಾ ನದಿ ಪಾತ್ರದಲ್ಲಿ ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಸೂಚಿಸಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ