ಮೋದಿ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ !

Kannada News

27-10-2017 377

ರಾಯಚೂರು: ಕೇಂದ್ರ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಕೋಟ್ಯಂತರ ಉದ್ಯೋಗ ಸೃಷ್ಟಿಸುವುದಾಗಿ ನೀಡಿದ್ದ ಭರವಸೆ ಈಡೇರಿಸದ ಕ್ರಮ ಖಂಡಿಸಿ ರಾಯಚೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಕೇಂದ್ರ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ನಗರದ ಕೇಂದ್ರ ಬಸ್ ನಿಲ್ದಾಣದಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು ಕೇಂದ್ರ ಅಂಚೆ ಕಚೇರಿಗೆ ಆಗಮಿಸಿ ಒಳಗೆ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾನಿರತ ಯುವಕರನ್ನು ಬಂಧಿಸಿ ಪೊಲೀಸ್ ವಾಹನಗಳಲ್ಲಿ ಕರೆದೊಯ್ದು ನಂತರ ಬಿಡುಗಡೆ ಮಾಡಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ದೇಶದ ಎಲ್ಲ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಸರ್ಕಾರ ಬಂದು ಮೂರು ವರ್ಷ ಕಳೆದರೂ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಲ್ಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಧಿಕಾರಕ್ಕೆ ಬರುವುದಕ್ಕೂ ಮುಂಚೆ ದೇಶದಲ್ಲಿ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಪ್ರಧಾನಿ ಘೋಷಿಸಿದ್ದರು. ಆದರೆ, ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಹುದ್ದೆಗಳ ಭರ್ತಿ ಮಾಡದೇ ನಿರ್ಲಕ್ಷಿಸಿರುವುದು ಖಂಡನೀಯ ಎಂದು ದೂರಿದರು.




ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ