ವಿಷ ಆಹಾರ: ವಿದ್ಯಾರ್ಥಿಗಳು ಅಸ್ವಸ್ಥ

Kannada News

27-10-2017

ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾನಿಲಯದ ನ್ಯೂ ಹಾಸ್ಟೆಲ್‍ ನಲ್ಲಿ ವಿಷ ಆಹಾರ ಸೇವಿಸಿ, 30 ಬಿಎಸ್‍ಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಬಿಎಸ್‍ಸಿ ಮೂರನೇ ವರ್ಷದ ವಿದ್ಯಾರ್ಥಿಗಳು ನಿನ್ನೆ ರಾತ್ರಿ ಎಂದಿನಂತೆ ಹಾಸ್ಟೆಲ್‍ನಲ್ಲಿ ಊಟ ಮಾಡಿ ಮಲಗಿದ್ದಾರೆ. ತಡ ರಾತ್ರಿ ವಾಂತಿ ಬೇಧಿಯಾಗಿದೆ. ಇಂದು ಬೆಳಗ್ಗೆ ತೀವ್ರ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೆಲವರು ಗುಣಮುಖರಾಗಿ ಪರೀಕ್ಷೆಗೆ ಹಾಜರಾಗಿದ್ದಾರೆ. 5 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗೆ ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

 


ಸಂಬಂಧಿತ ಟ್ಯಾಗ್ಗಳು

Kannada News Karnataka ವಿಷ ಆಹಾರ ಹಾಸ್ಟೆಲ್‍


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ