ಮರಳು ದಂಧೆ: ಇಬ್ಬರ ಬಂಧನ !

Kannada News

28-10-2017

ರಾಯಚೂರು: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ನಾಲ್ಕು ಟ್ರಾಕ್ಟರ್ ಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಘಟನೆಯು ರಾಯಚೂರು ಜಿಲ್ಲೆ ಸಿಂಧನೂರಿನ ಬಳ್ಳಾರಿ ರಸ್ತೆಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ಚಾಲಕರಾದ ಲಿಂಗಣ್ಣ ಮತ್ತು ಮಹಾದೇವ ಬಂಧಿತ ಆರೋಪಿಗಳು. ಕಳೆದ ಕೆಲವು ದಿನಗಳಿಂದ ಅಕ್ರಮ ಮರಳು ಧಂಧೆ ನಡೆಸುತ್ತಿದ್ದರು ಎನ್ನಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ಕುರಿತಂತೆ ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಮರಳು ದಂಧೆ ಸಿಂಧನೂರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ