ಬಸ್ ನಿರ್ವಾಹಕರಿಗೆ ಸಚಿವರ ಎಚ್ಚರಿಕೆ !

Kannada News

28-10-2017 401

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ನಗರ ಸಾರಿಗೆ ಬಸ್ ಗಳಲ್ಲಿ ಪಾಸ್ ಹೊಂದಿರುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಬಸ್ ನಿರ್ವಾಹಕರು ಸೌಜನ್ಯದಿಂದ ವರ್ತಿಸಬೇಕು ಎಂದು ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ರಾಜ್ಯದ ಬಹುತೇಕ ಕಡೆ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರೊಂದಿಗೆ ಸಂಘರ್ಷಕ್ಕೆ ಇಳಿಯುತ್ತಿರುವ ಬಗ್ಗೆ ದೂರುಗಳು ಬಂದಿರುವ ಬಗ್ಗೆ ಸಚಿವರು ಎಚ್ಚರಿಕೆಯ ಸೂಚನೆ ನೀಡಿದ್ದಾರೆ. ಸಾರ್ವಜನಿಕರೊಂದಿಗೆ ನಿರ್ವಾಹಕರು ಸೌಹಾರ್ದಯುತವಾಗಿ ಸ್ಪಂದಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ