ಕುಮಾರ ಸ್ವಾಮಿಗೆ ಡಿಕೆಶಿ ಸಲಹೆ !

Kannada News

28-10-2017

ಬೆಂಗಳೂರು: ಕುತೂಹಲ ಮೂಡಿಸಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ಬಗ್ಗೆ ಎಚ್ಡಿಕೆ ಪ್ರತಿಕ್ರಿಯೆ ನೀಡಿದ್ದು,  ನೀವು ರಾಜಕಾರಣದಲ್ಲಿ ಹೋಗುತ್ತಿರುವ ಸ್ಪೀಡು ಜಾಸ್ತಿ ಇದೆ, ಆರೋಗ್ಯದ ಬಗ್ಗೆ ಗಮನ ನೀಡಿ ಎಂದು ಡಿ.ಕೆ.ಶಿವಕುಮಾರ್ ನನಗೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ವಿದ್ಯುತ್ ಖರೀದಿ ಅಕ್ರಮ ಕುರಿತು ತನಿಖೆ ನಡೆಸಲು ಸದನ ಸಮಿತಿ ರಚನೆ ಮಾಡಲಾಗಿತ್ತು. ಡಿ.ಕೆ.ಶಿವಕುಮಾರ್ ಇದರ ಅಧ್ಯಕ್ಷರಾಗಿದ್ದು, ನಾನು ಸಮಿತಿಯ ಸದಸ್ಯ. ಅಕ್ಟೋಬರ್ 30 ರಂದು ಸಮಿತಿಯು ಸರಕಾರಕ್ಕೆ ಅಂತಿಮ ವರದಿ ಸಲ್ಲಿಸಲಿದೆ. ಈ ಹಿನ್ನೆಲೆಯಲ್ಲಿ ವರದಿಯ ಕರಡು ಪ್ರತಿ ತೋರಿಸಲು ಶಿವಕುಮಾರ್ ಮನೆಗೆ ಬಂದಿದ್ದರು ಎಂದರು.

ವಿದ್ಯುತ್ ಖರೀದಿಯಲ್ಲಿ ನಡೆದ ಅಕ್ರಮಗಳನ್ನು ದಾಖಲೆಗಳ ಸಮೇತ ಸಂಗ್ರಹಿಸಿ ಎರಡು ತಿಂಗಳ ಹಿಂದೆಯೇ ಸಮಿತಿಗೆ ಸಲ್ಲಿಸಿದ್ದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಆದ ಸಾವಿರಾರು ಕೋಟಿ ರೂ. ನಷ್ಟದ ಕುರಿತೂ ಅಂಕಿ- ಅಂಶ ನೀಡಿದ್ದೆ. ಈ ಅಂಶಗಳನ್ನೂ ಒಳಗೊಂಡಂತೆ ಅಧಿಕಾರಿಗಳು‌ ಅಂತಿಮ ವರದಿ ಸಿದ್ದಪಡಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿವರಣೆ ನೀಡಿದ್ರು. ಜೊತೆಗೆ, ಅಕ್ಟೋಬರ್ 30ರಂದು ನಡೆಯಲಿರುವ ಅಂತಿಮ‌ ಸಭೆಯಲ್ಲಿ ಪಾಲ್ಗೊಳ್ಳಲು ಸಹ ಆಹ್ವಾನ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನು‌ ಹೊರತು ಪಡಿಸಿ ಯಾವುದೇ ರಾಜಕೀಯ ‌ವಿಷಯಗಳ ಬಗ್ಗೆ ಪ್ರಸ್ತಾಪ ನಾನು ಮತ್ತು ಡಿ.ಕೆ.ಶಿವಕುಮಾರ್‌ ಚರ್ಚೆ ಮಾಡಲಿಲ್ಲ ಎಂದು ಎಚ್ಡಿಕೆ ‌ಸ್ಪಷ್ಟಪಡಿಸಿದ್ದಾರೆ. ಸುಮಾರು ಒಂದು‌ ಗಂಟೆಗಳ ಕಾಲ ಉಭಯ ನಾಯಕರು ಎಚ್ಡಿಕೆ ಅವರ ಜೆಪಿ.ನಗರದ ನಿವಾಸದಲ್ಲಿ ಚರ್ಚೆ ನಡೆಸಿದ್ರು.


ಸಂಬಂಧಿತ ಟ್ಯಾಗ್ಗಳು

Kannada News Karnataka ವಿದ್ಯುತ್ ಖರೀದಿ ಬೊಕ್ಕಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ