ಹೊಸ ಇತಿಹಾಸ ಬರೆದ ಪರಮೇಶ್ವರ್ !

Kannada News

28-10-2017

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾದ ಡಾ.ಜಿ.ಪರಮೇಶ್ವರ್ ರಾಜ್ಯ ಕಾಂಗ್ರೆಸ್ ನಲ್ಲಿ ಹೊಸತೊಂದು ಇತಿಹಾಸ ಸೃಷ್ಟಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಅವರು  ನೇಮಕಗೊಂಡು ಇಂದಿಗೆ (ಅ.28) ಏಳು ವರ್ಷ ಪೂರ್ಣಗೊಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಇಷ್ಟೊಂದು ಸುಧೀರ್ಘ ಅವಧಿಗೆ ಯಾರೂ ಕೂಡಾ ಕಾರ್ಯ ನಿರ್ವಹಣೆ ಮಾಡಿಲ್ಲ.

ಪಕ್ಷದ ಅಧ್ಯಕ್ಷರಾಗಿ ಏಳು ವರ್ಷ ಪೂರ್ಣಗೊಳಿಸಿರುವ ಪರಮೇಶ್ವರ್ ಅವರಿಗೆ ಸಿ.ಎಂ. ಸೇರಿದಂತೆ ಹಲವು ಮಂದಿ ಹಿರಿಯ ನಾಯಕರು ಶುಭ ಕೋರಿದರು. ಬೆಳಿಗ್ಗೆಯೆ ಅವರ ನಿವಾಸಕ್ಕೆ ಆಗಮಿಸಿದ ಪಕ್ಷದ ಹಲವು ಮಂದಿ ನಾಯಕರು ಶುಭ ಹಾರೈಸಿದರು. ಮುಂದಿನ ಚುನಾವಣೆಯಲ್ಲಿ ಪಕ್ಷ ತಮ್ಮ ನಾಯಕತ್ವದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಶುಭಕೋರಿದರು.

2010ರಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿದ್ದ ಪರಮೇಶ್ವರ್ , 2013ರ ವಿಧಾನಸಭೆ ಮತ್ತು 2014ರ ಲೋಕಸಭೆ ಚುನಾವಣೆ ಅವಧಿಯಲ್ಲಿ ಪಕ್ಷದ ಸಾರಥ್ಯ ವಹಿಸಿದ್ದರು. ಈ ಎರಡೂ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಗೆ ಪರಮೇಶ್ವರ್ ಅದೃಷ್ಟದ ನಾಯಕ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ  ಕ್ಷೇತ್ರದಿಂದ  ಸೋಲು ಅನುಭವಿಸಿದ್ದ ಅವರು ಬಳಿಕ, ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು, ಕೆ.ಜೆ. ಜಾರ್ಜ್ ರಾಜೀನಾಮೆಯಿಂದ ತೆರವಾಗಿದ್ದ ಗೃಹ ಖಾತೆಯನ್ನು ಒಂದು ವರ್ಷ ಏಳು ತಿಂಗಳು ನಿಭಾಯಿಸಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ