ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಪಾಠ !

Kannada News

28-10-2017

ಬೆಂಗಳೂರು: ಮಿಷನ್ 150 ಕಾರ್ಯ ಸೂಚಿಯೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ದತೆ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ, ಕಾರ್ಯತಂತ್ರದ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ ಪಾಠ ಮಾಡಲಿದ್ದಾರೆ. ರಾಜ್ಯದಲ್ಲಿನ ವಿವಿಧ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಇದೇ 29 ರಂದು ರಾಜ್ಯಕ್ಕೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ಜೊತೆ ವಿಧಾನಸಬಾ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ರಾಜ್ಯ ಬಿಜೆಪಿ ಹಿರಿಯ ಮುಖಂಡರು ಚರ್ಚೆ ನಡೆಸಲಿದ್ದಾರೆ.

ನಾಳೆ ನಗರದ ಅರಮನೆ ಮೈದಾನದಲ್ಲಿ ನಡೆಯುವ `ಸೌಂದರ್ಯ ಲಹರಿ' ಪಾರಾಯಣ ಕಾರ್ಯಕ್ರಮ ಮುಗಿಸಿ ಬೀದರ್‍ ಗೆ ತೆರಳುವುದಕ್ಕೆ ಮೊದಲು ಮೋದಿ ಜೊತೆ ಈ ಚರ್ಚೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಈ ಚರ್ಚೆ ವೇಳೆ ಕರ್ನಾಟಕ ಪರಿವರ್ತನೆ ರಥ ಯಾತ್ರೆ ಮತ್ತು ಚುನಾವಣೆಗಾಗಿ ನಡೆಸಿರುವ ಸಿದ್ಧತೆಗಳ ಬಗ್ಗೆ ಮೋದಿಗೆ ವರದಿ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಚುನಾವಣೆಯಲ್ಲಿ ಅನುಸರಿಸಬೇಕಾದ ತಂತ್ರಗಳ ಬಗ್ಗೆ ಮೋದಿಯವರೂ ರಾಜ್ಯ ನಾಯಕರಿಗೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಮಿಷನ್ 150 ಕಾರ್ಯತಂತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ