ಬಿಜೆಪಿಗೆ ವಿಜಯಶಂಕರ್ ಗುಡ್ ಬೈ..

Kannada News

28-10-2017

ಮೈಸೂರು: ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.  ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ರವಾನಿಸಿದ್ದಾರೆ. ಬಿಜೆಪಿ ನಾಯಕರ ವರ್ತನೆಯಿಂದ ಬೇಸತ್ತು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಈ ಮಧ್ಯೆ, ಬಿಜೆಪಿ ಹೈಕಮಾಂಡ್ ಸೂಚನೆಯಂತೆ ರಾಜ್ಯ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಪ್ರತಾಪ್​ ಸಿಂಹ, ಸಂಸದೆ ಶೋಭಾ ಕರಂದ್ಲಾಜೆ ಅವರು ವಿಜಯಶಂಕರ್ ಮನವೊಲಿಸಲು ಯತ್ನಿಸಿದ್ದರು. ಆದರೆ ಮನವೊಲಿಕೆಗೆ ಅವಕಾಶ ಕೊಡದೆ ವಿಜಯ ಶಂಕರ್​ ಅಂತರ ಕಾಯ್ದುಕೊಂಡಿದ್ದರು.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ