‘ಸಿದ್ದು ರಾಜ್ಯದ ಖಜಾನೆ ದರೋಡೆ ಮಾಡುತ್ತಿದ್ದಾರೆ’

Kannada News

28-10-2017

ಹುಬ್ಬಳ್ಳಿ: ದಿನದಿಂದ ದಿನಕ್ಕೆ ಸಿದ್ದರಾಮಯ್ಯ ನವರ ಸರ್ಕಾರದ ಆಯುಷ್ಯ ಮುಗಿತಾ ಇದೆ,  ಸರ್ಕಾರದ ಆಯುಷ್ಯ ಸ್ವಲ್ಪ ದಿನ ಮಾತ್ರ ಇದೆ. ಅದರಿಂದಾಗಿ, ಸಿದ್ದರಾಮಯ್ಯ ರಾಜ್ಯದ ಖಜಾನೆ ದರೋಡೆ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್.ಯಡಿಯೂರಪ್ಪ ಆಪಾದಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬೆಂಗಳೂರು ನಗರವನ್ನು ಬಿಬಿಎಂಪಿ ಮೂಲಕ ಒತ್ತೆ ಇಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಸಿದ್ದರಾಮಯ್ಯ ಮತ್ತು ಅವರ ಸಚಿವರು ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಹಾಗೂ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ