ತಲೆಮರೆಸಿಕೊಂಡಿದ್ದ ನಿರ್ಮಾಪಕ ಬಂಧನ !

Kannada News

28-10-2017

ಬೆಂಗಳೂರು: ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ 'ಡಬಲ್ ಮೀನಿಂಗ್' ಚಿತ್ರದ ನಿರ್ಮಾಪಕ ಪ್ರತಾಪ್ ರಂಗು ಅಲಿಯಾಸ್ ರಂಗನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.

ಹಲವು ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ರಂಗು ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದನು. ಅಲ್ಲದೆ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿವೆ.

ಕೆಲ ದಿನಗಳ ಹಿಂದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರಂಗು ಪೊಲೀಸ್ ಠಾಣೆಯಿಂದಲೇ ಪರಾರಿಯಾದ್ದ. ಆಂಧ್ರಪ್ರದೇಶದ ಆನಂತಪುರ ಜಿಲ್ಲೆಯ ಮಡಕಸಿರಾದಲ್ಲಿ ತಲೆಮರೆಸಿಕೊಂಡಿದ್ದ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡು ನಗರಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸವೇಶ್ವರನಗರ, ಮಹಾಲಕ್ಷ್ಮಿಲೇಔಟ್ ಸುತ್ತಮುತ್ತ ಸರಗಳ್ಳತನ ನಡೆಸಿರುವ ಕೃತ್ಯಗಳು ಆರೋಪಿಯ ವಿರುದ್ದ ದಾಖಲಾಗಿವೆ.


ಸಂಬಂಧಿತ ಟ್ಯಾಗ್ಗಳು

Kannada news Karnataka ಸರಗಳ್ಳತನ ಡಬಲ್ ಮೀನಿಂಗ್'


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ