ನಡು ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ !

Kannada News

28-10-2017

ಬೆಂಗಳೂರು: ನಡು ರಸ್ತೆಯಲ್ಲಿಯೇ ಕ್ಯಾಂಟರ್ ಲಾರಿಯೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ, ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಿನ್ನೆ ರಾತ್ರಿ ನಡೆದಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸಿಗ್ನಲ್‍ ನಲ್ಲಿ ನಿಂತಿದ್ದ ಲಾರಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಕೆಳಗಿಳಿದು ಪಾರಾಗಿದ್ದಾನೆ. ಕಾರ್ಪೋರೇಷನ್ ಸರ್ಕಲ್‍ನಿಂದ ಎಂಜಿ ರಸ್ತೆಯ ಕಡೆಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ.

ರಸ್ತೆ ಮಧ್ಯೆ ಲಾರಿ ಹೊತ್ತಿ ಉರಿದಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. ಬೆಂಕಿ ಆಕಸ್ಮಿಕದ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಆದರೆ ಅಷ್ಟರಲ್ಲಾಗಲೇ ಕ್ಯಾಂಟರ್ ಸುಟ್ಟು ಕರಕಲಾಗಿತ್ತು. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬ್ಯಾಟರಿಯಲ್ಲಿ ಹೊತ್ತಿಕೊಂಡ ಬೆಂಕಿ, ಡೀಸೆಲ್ ಟ್ಯಾಂಕ್‍ಗೆ ವ್ಯಾಪಿಸಿ ನಂತರ ಇಡೀ ಕ್ಯಾಂಟರ್‍ ಗೆ ತಗುಲಿದೆ ಎಂದು ತಿಳಿದುಬಂದಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ