ಬಾವಿಯಲ್ಲಿ ಅಂತ್ಯ ಕಂಡ ಮೂವರು !

Kannada News

30-10-2017

ಬೆಳಗಾವಿ: ಬಾವಿಯಲ್ಲಿ ಕಾಲು ಜಾರಿ ಬಿದ್ದು ಮೂರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆಯು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಯರಗಟ್ಟಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿಯ ಬಾವಿಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.

ಚೇತನಾ(2), ಪುಷ್ಪಾ (4) ಮತ್ತು ಪೂಜಾ(6) ಎಂಬ ಮೂರು ಹೆಣ್ಣು ಮಕ್ಕಳು ಮೃತ ದುರ್ದೈವಿಗಳು. ಚೇತನಾ(2) ಮಗುವಿನ ಶವ ಬಾವಿಯಲ್ಲಿ ತೇಲಾಡುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರೇ ಇನ್ನಿಬ್ಬರು ಮಕ್ಕಳ ಮೃತ ದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮುರಗೋಡ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಮೃತ ದೇಹ ಸವದತ್ತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ