ಎಟಿಎಂ ಗೆ ತುಂಬುವ ಹಣ ಕಳ್ಳರ ಪಾಲು !

Kannada News

30-10-2017

ಬೆಂಗಳೂರು: ಎಟಿಎಂನಲ್ಲಿ ಹಣ ತುಂಬುವ ವೇಳೆ, ದುಷ್ಕರ್ಮಿಗಳು ದಾಳಿ ಮಾಡಿ ಹಣ ದರೋಡೆ ಮಾಡಿರುವ ಘಟನೆ ನಗರದ ಜಾಲಹಳ್ಳಿ ಕ್ರಾಸ್ ಬಳಿಯ ಬಾಗಲಗುಂಟೆ ಎಟಿಎಂನಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ದರೋಡೆಕೋರರು 18.5 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ಹೆಲ್ಮೆಟ್ ಧರಿಸಿ ಪಲ್ಸರ್  ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಸೆಕ್ಯೂರ್‍ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಕಳ್ಳರು, ಪ್ರತಿರೋಧ ಒಡ್ಡಿದ್ದಕ್ಕೆ ಕಸ್ಟೋಡಿಯನ್ ಮೇಲೆ ತೀವ್ರವಾಗಿ ದಾಳಿ ಮಾಡಿದ್ದಾರೆ. ಅಲ್ಲದೆ ಸಾಗರ್ ಹಾಗೂ ಮೋಹನ್ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾರೆ. ಚಾಕು ಇರಿತದಿಂದ ಸಾಗರ್ ಗಂಭೀರವಾಗಿ ಗಾಯಗೊಂಡಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ.

ಎಟಿಎಂಗೆ ಹಣ ತುಂಬಿಸಲು ವ್ಯಾನ್ ನಿಂದ ಬ್ಯಾಗ್‍ ನಲ್ಲಿ ಹಣ ತೆಗೆದುಕೊಂಡು ಹೋಗುವಾಗ ದಾಳಿಯಾಗಿದೆ. 18.5 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ವಾಹನದಲ್ಲಿ ಇನ್ನೂ 1,26,50,000 ರೂಪಾಯಿ ಹಣ ಇತ್ತು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸಾಗರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Kannada News Karnataka ಎಟಿಎಂ ಪಲ್ಸರ್  ಬೈಕ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ