ಭೀಮಾ ತೀರದಲ್ಲಿ ಮತ್ತೆ ಗುಂಡಿನ ಕಾಳಗ !

Kannada News

30-10-2017

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಅಕ್ರಮ ಶಸ್ತ್ರಾಸ್ತ್ರ ಪತ್ತೆಗೆ ತೆರಳಿದ್ದ ಪೊಲೀಸರ ತಂಡದ ಮೇಲೆ ರೌಡಿ ಶೀಟರ್‍ ಗಳು ಗುಂಡಿನ ದಾಳಿ ನಡೆಸಿದ್ದು, ಚಡಚಣ ಪಿಎಸ್‍ಐ ಗೋಪಾಲ ಹಳ್ಳೂರ ಬಲಗೈಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ.

ರಾಜ್ಯದ ಗಡಿ ಗ್ರಾಮ ಕೊಂಕಣಗಾಂವ್‍ ನಲ್ಲಿನ ರೌಡಿಶೀಟರ್ ಧರ್ಮರಾಜ ಚಡಚಣ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ಪೊಲೀಸರು ಪ್ರತಿ ದಾಳಿ ನಡೆಸಿ ಗುಂಡು ಹಾರಿಸಿದ್ದು, ಧರ್ಮರಾಜ ಚಡಚಣ ಸೇರಿದಂತೆ ಇಬ್ಬರು ಸಹಚರರು ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಚಡಚಣ, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಣಗಾಂವ್ ಗ್ರಾಮದಲ್ಲಿ ಬಿಗಿ ಪೊಲೀಸ್ ಪಹರೆ ನಿಯೋಜಿಸಲಾಗಿದೆ ಪಿಎಸ್‍ಐ ಮೇಲೆಯೇ ಗುಂಡಿನ ದಾಳಿ ನಡೆದಿದ್ದು, ಈ ಭಾಗದ ಜನರನ್ನು ಬೆಚ್ಚಿ ಬೀಳಿಸಿದೆ.

ಗುಂಡಿನ ದಾಳಿಯಲ್ಲಿ ಪಿಎಸ್‍ಐ ಗೋಪಾಲ್ ಅವರಿಗೆ ಎರಡು ಗುಂಡು ತಗುಲಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸ್ಥಳಕ್ಕೆ ಎಸ್.ಪಿ ಕುಲದೀಪ್ ಕುಮಾರ್ ಜೈನ್, ಹೆಚ್ಚುವರಿ ಎಸ್.ಪಿ ಶಿವಕುಮಾರ್ ಗುಣಾರೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಗುಂಡಿನ ದಾಳಿ ನಡೆದಿರುವ ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದೆ.

ಪಿಎಸ್‍ಐ ಮೇಲೆ ಗುಂಡು ಹಾರಿಸಿರುವ ಆರೋಪಿ ಧರ್ಮರಾಜ್, ಪುತ್ರಪ್ಪ ಸಾಹುಕಾರ ಭೈರಗೊಂಡ ಹಾಗೂ ಫಯಾಜ್ ಮುಷ್ರಿಫ್ ಕೊಲೆಯಲ್ಲಿ ಭಾಗಿಯಾಗಿದ್ದ. ಧರ್ಮರಾಜ್ ಕೆಲ ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದು, ಈ ಘಟನೆ ಯಾಕೆ ನಡೆಯಿತು ಎನ್ನುವುದರ ನಿಖರ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಭೀಮಾ ತೀರ ಗುಂಡಿನ ದಾಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ