ಮಗನ ಮುಂದೆಯೇ ತಂದೆ ಸಾವು !

Kannada News

30-10-2017

ಹಾವೇರಿ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿಕೊಂಡು ರಿಪೇರಿ ಮಾಡುತ್ತಿದ್ದ ತಂದೆ, ಮಗನಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದು ಭಾರಿ ದುರಂತ ಸಂಭವಿಸಿದೆ. ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ತಂದೆ ಸಾವನ್ನಪ್ಪಿದ್ದು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಹೊರವಲಯದಲ್ಲಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಘಟನೆಯಲ್ಲಿ ಬ್ಯಾಡಗಿ ತಾಲ್ಲೂಕು ಗುಡ್ಡದಬೇವಿನಹಳ್ಳಿ ಗ್ರಾಮದ ನಿವಾಸಿ ಸಹದೇವಪ್ಪ ಸಂಗಾಪುರ(52) ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಮಗ ಮಂಜುನಾಥ (32) ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಟ್ರ್ಯಾಕ್ಟರ್ ಬೊಲೆರೋ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ