198 ವಾರ್ಡ್ ಗಳಿಗೂ ಸಿಸಿಟಿವಿ ಕ್ಯಾಮೆರಾ !

Kannada News

30-10-2017

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ `ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ನಗರದ 198 ವಾರ್ಡ್‍ಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲು ಪೊಲೀಸ್ ಇಲಾಖೆಗೆ 20 ಕೋಟಿ ಮಂಜೂರು ಮಾಡಲಾಗಿದೆ' ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಜಯನಗರ ಬಳಿಯ ಗುರಪ್ಪನಪಾಳ್ಳ ವಾರ್ಡ್‍ನಲ್ಲಿ ಹೊಸದಾಗಿ ತೆರೆಯಲಾದ ಪೊಲೀಸ್ ಹೊರ ಠಾಣೆ ಉದ್ಘಾಟಿಸಿ, ಮಾತನಾಡಿದ ಅವರು, ನಗರದ ಪ್ರಮುಖ ಬೀದಿಗಳು ವಾಣಿಜ್ಯ ಪ್ರದೇಶಗಳಲ್ಲಿ ಸಿಸಿ ಕ್ಯಾಮಾರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಸದ್ಯ ನಗರದ ಪೊಲೀಸರ ಅಧೀನದಲ್ಲಿ 352 ಹಾಗೂ ಖಾಸಗಿಯವರ ಒಡೆತನದಲ್ಲಿ 5 ಲಕ್ಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿವೆ. ನಗರದ ಡಲ್ಲಾ ವಾರ್ಡ್‍ನಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ ಸಿಸಿ ಕ್ಯಾಮರಾ ಅಳವಡಿಸಿದರೆ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಬಹುದು ಎಂದರು. ನಗರದಲ್ಲಿ ಬಾರ್, ಕ್ಲಬ್ ಹಾಗೂ ಮೀಟರ್ ಬಡ್ಡಿ ಮಾಫಿಯಾದ ಅಕ್ರಮದ ಬಗ್ಗೆ ದೂರುಗಳು ಬಂದಿವೆ. ಅವುಗಳನ್ನು ಮಟ್ಟಹಾಕಲು 25 ಅಂಶಗಳ ಸಲಹೆಯನ್ನು ಪಾಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ' ಎಂದು ಹೇಳಿದರು.

 

 

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ