‘ವಾಸವಿರುವವನೇ ಮನೆಯ ಮಾಲೀಕ’- ಅಂಗೀಕಾರ

Kannada News

30-10-2017

ತುಮಕೂರು: ಲಂಬಾಣಿ ತಾಂಡ, ಗೊಲ್ಲರಹಟ್ಟಿ, ನಾಯಕರ ಹಟ್ಟಿ ಸೇರಿದಂತೆ ಖಾಸಗಿ ಜಮೀನಿನಲ್ಲಿ ಅನಧಿಕೃತವಾಗಿ ವಾಸಿಸುತ್ತಿರುವವರಿಗೆ ಮಾಲೀಕತ್ವ ನೀಡುವ, ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ-ವಾಸವಿರುವವನೇ ಮನೆಯ ಮಾಲೀಕ-2016ಕ್ಕೆ ರಾಷ್ಟ್ರಪತಿಗಳಿಂದ ಅಂಗೀಕಾರ ದೊರೆತಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ನಗರ ಮತ್ತು ಗ್ರಾಮೀಣ ವಸತಿ ಮತ್ತು ನಿವೇಶನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 50-60 ವರ್ಷಗಳಿಂದ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ಕುರುಬರಹಟ್ಟಿ, ನಾಯಕರ ಹಟ್ಟಿ, ಹಾಡಿ, ಪಾಳ್ಯ, ಕಾಲೋನಿ, ಮಜರೆ, ಮತ್ತಿತರ ಖಾಸಗಿ ಜಮೀನಿನಲ್ಲಿ ಅನಧಿಕೃತವಾಗಿ ವಾಸಿಸುತ್ತಿದ್ದರು. ಇವರನ್ನು ಜಮೀನು ಮಾಲೀಕರು ಒಕ್ಕಲೆಬ್ಬಿಸಲು ಮುಂದಾಗುತ್ತಿದ್ದರು. ಇದನ್ನು ತಡೆಯಲು ಕರ್ನಾಟಕ ಭೂ ಸುಧಾರಣಾ ಕಾಯ್ದೆ -2016(ತಿದ್ದುಪಡಿ)ಕ್ಕೆ ರಾಷ್ಟ್ರಪತಿಗಳಿಂದ ಅಂಕಿತ ದೊರೆತಿದ್ದು, ಇದರ ಪ್ರತಿ ಇದೀಗ ಕೈಸೇರಿದೆ. ರಾಜ್ಯ ಸರಕಾರವೂ ಅಧಿಸೂಚನೆ ಹೊರಡಿಸಲಿದೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ