ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ !

Kannada News

30-10-2017

ಬೆಂಗಳೂರು: ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬನನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ ಪರ್ಸ್ ಕಸಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವೈಯಾಲಿಕಾವಲ್‍ ನ 1ನೇ ಮುಖ್ಯರಸ್ತೆಯ ಬಾರ್ ಬಳಿ ನಡೆದಿದೆ.

ಹಲ್ಲೆಯಿಂದ ಗಾಯಗೊಂಡಿರುವ ವಿಕ್ಕಿಬ್ರೌನ್ ಸ್ಥಳೀಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೆಲಸ ಮುಗಿಸಿಕೊಂಡು ನಿನ್ನೆ ರಾತ್ರಿ 11 ರ ವೇಳೆ ವೈಯಾಲಿಕಾವಲ್ ಬಳಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವಿಕ್ಕಿಬ್ರೌನ್‍ ನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗಾಯಗೊಂಡು ನರಳಾಡುತ್ತಿದ್ದ ವಿಕ್ಕಿಬ್ರೌನ್‍ ನನ್ನು ಸ್ಥಳೀಯರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಳೆಯ ವೈಷಮ್ಯದಲ್ಲಿ ಹಲ್ಲೆ ಮಾಡಿ, ಆತನ ಬಳಿಯಿದ್ದ ಹಣ ಮತ್ತು ಪರ್ಸ್ ಕದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ವೈಯಾಲಿಕಾವಲ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ