ಕಿಡಿಗೇಡಿಗಳ ಕೃತ್ಯ: ಶಿವಾಜಿ ಪುತ್ಥಳಿ ಧ್ವಂಸ

Kannada News

31-10-2017

ಬೀದರ್: ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ ತಾಲ್ಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ.

ಬಾದಲಗಾಂವ ಗ್ರಾಮದ ಸರ್ಕಲ್‍ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಇತ್ತು. ಆದರೆ ತಡರಾತ್ರಿ ಸುಮಾರು 1.30 ಕ್ಕೆ ಕೀಡಿಗೇಡಿಗಳು ಶಿವಾಜಿ ಮಹಾರಾಜರ ಪುತ್ಥಳಿಯ ಶಿರವನ್ನು ಧ್ವಂಸ ಮಾಡಿದ್ದಾರೆ. ಮುಂಜಾನೆ ಈ ವಿಚಾರವನ್ನು ತಿಳಿದ ಗ್ರಾಮಸ್ಥರು ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ