ಬೈಕ್ ಡಿಕ್ಕಿ: ಸ್ಥಳದಲ್ಲೇ ಪ್ರಾಣ ಬಿಟ್ಟ ಯುವಕ !

Kannada News

31-10-2017

ಮೈಸೂರು: ಮೈಸೂರಿನ ನಂಜನಗೂಡು ಸಮೀಪ ಎರಡು ಬೈಕ್' ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸವಾರ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಜಗದೀಶ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಜೆ.ಎಸ್.ಎಸ್ ಪಾಲಿಟೆಕ್ನಿಕ್ ಕಾಲೇಜು ಬಳಿಯ ಹೆದ್ದಾರಿಯಲ್ಲಿ ಬೈಕ್‍ ನಲ್ಲಿ ಜಗದೀಶ್ ನಿಂತಿದ್ದಾಗ ಎದುರುಗಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆಡಿದೆ. ಪರಿಣಾಮ ಜಗದೀಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೊರಳವಾಡಿ ಗ್ರಾಮದ ಚೇತನ್, ಯೋಗೀಶ್ ಹಾಗೂ ಮಹೇಶ್ ತೀವ್ರವಾಗಿ ಗಾಯಗೊಂಡಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆ ಪಿಎಸ್‍ಐ ಆನಂದ್ ಭೇಟಿ ನೀಡಿ ಪ್ರಕರಣ ದಾಖಲಾಗಿಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ನಂಜನಗೂಡು ಅಪಘಾತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ