ಅಪಘಾತ: ಬೈಕ್ ಸವಾರ ಸಜೀವ ದಹನ

Kannada News

31-10-2017

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಜೀವ ದಹನಗೊಂಡಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ, ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬೈಕ್ ಲಾರಿಯ ಅಡಿಗೆ ನುಸುಳಿದೆ. ಇದರಿಂದ ಪೆಟ್ರೋಲ್ ಟ್ಯಾಂಕ್‍ ಗೆ ಹಾನಿಯಾಗಿದ್ದು, ಪೆಟ್ರೋಲ್ ಸೋರಿಕೆಯಾಗಿ ಕಿಡಿ ಹೊತ್ತಿ ಬೆಂಕಿ ಕಾಣಿಸಿಕೊಂಡಿದೆ. ಇದಾದ ಕ್ಷಣಾರ್ಧದಲ್ಲಿ ಬೈಕ್ ಮತ್ತು ಮುಂಬದಿ ಸವಾರ ದಹನಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಬೆಂಕಿ ನಂದಿಸಿದ್ದಾರೆ. ಗಾಯಾಳುವನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಉತ್ತರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ