‘ನನ್ನೊಬ್ಬಳನ್ನೇ ವಿವಾದಕ್ಕೆ ಎಳೆದು ತರಬೇಡಿ’

Kannada News

31-10-2017

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಭಾಷೆಯಲ್ಲಿ ಕರಪತ್ರಗಳನ್ನು ಮುದ್ರಿಸಿ ಹಂಚಿದ ವಿಚಾರಕ್ಕೆ ಸಂಬಂಧಿಸಿದಂತೆ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್,  ತಮ್ಮ ಕೆಲಸವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಕೇವಲ ನನ್ನ ಒಬ್ಬಳನ್ನೇ ವಿವಾದಕ್ಕೆ ಎಳೆದು ತರಬೇಡಿ, ಎಲ್ಲಾ ಪಕ್ಷದವರೂ ಇದೇ ರೀತಿ ಮಾಡುತ್ತಾರೆ ಎಂದರು. ಆ ಭಾಗದಲ್ಲಿ ಮರಾಠಿ ಭಾಷಿಕರೂ ಕೂಡಾ ನಮ್ಮ ಪಕ್ಷದ ಕಾರ್ಯಕರ್ತರಿದ್ದಾರೆ, ಅವರಿಗೆ ನಮ್ಮ ಪಕ್ಷದ ಕಾರ್ಯಕ್ರಮಗಳನ್ನು ತಿಳಿಸಲು ಇದು ಅನಿವಾರ್ಯ, ಹಾಗಾಗಿ ಮರಾಠಿ ಭಾಷೆಯಲ್ಲಿ ಕರಪತ್ರಗಳನ್ನು ಮುದ್ರಿಸಿ ಹಂಚಲಾಗಿತ್ತು ಎಂದು ಹೇಳಿದ್ದಾರೆ.

ಅದಲ್ಲದೇ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ರಾಜಭವನಕ್ಕೆ ಬಂದ ಸದಸ್ಯರು. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ನೀಡುವಂತೆ ಕೆಪಿಸಿಸಿ ಮಹಿಳಾ ಘಟಕ ಮನವಿ ಮಾಡಿದ್ದಾರೆ. ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡಿ, ಯುಪಿಎ ಅವಧಿಯಲ್ಲಿ ಈ ಮಸೂದೆ ಪಾಸಾಗಿತ್ತು ಎಂದ ಅವರು, ಮುಂದೆ ನಡೆಯುವ ಲೊಕಸಭಾ ಅಧಿವೇಶನದಲ್ಲಿ ಇದಕ್ಕೆ ಅನುಮೋದನೆ ನೀಡುವಂತೆ ರಾಜ್ಯಪಾಲರ ಮೂಲಕ ಪ್ರಧಾನಿಗೆ ಮನವಿ ಮಾಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ