ರೈತರಿಗಾಗಿ ಸಮಾನತಾ ಸಮಾವೇಶ !

Kannada News

31-10-2017

ಹುಬ್ಬಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಯನ್ನು ಧಿಕ್ಕರಿಸಿ ನರಗುಂದದಲ್ಲಿ ನವೆಂಬರ್ ಮೂರನೇ ವಾರದಲ್ಲಿ ಜೆಡಿಎಸ್ ವತಿಯಿಂದ ಸಮಾನತಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಜೆಡಿಎಸ್ ರೈತ ವಿಭಾಗದ ಅಧ್ಯಕ್ಷ ಗಂಗಾಧರ ಪಾಟೀಲ ಕುಲಕರ್ಣಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಟಿ ಅನಾವೃಷ್ಟಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ರಾಷ್ಟ್ರೀಯ ಪಕ್ಷಗಳು ರೈತರನ್ನು ಕಡೆಗಣಿಸಿ ರಾಜಕೀಯ ಲಾಭಕ್ಕಾಗಿ ರೈತರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ರಾಜ್ಯದ 224 ವಿಧಾನ ಸಭೆ ಕ್ಷೇತ್ರದಲ್ಲಿ ಜೆಡಿಎಸ್ ಸಮಾನತಾ ಸಮಾವೇಶ ಹಮ್ಮಿಕೊಳ್ಳಲು ನಿರ್ಧಾರ ಕೈಗೊಂಡಿದೆ‌. ಇದರ ಪ್ರಥಮ ಸಮಾವೇಶ ಬಂಡಾಯದ ನೆಲವಾದ ನರಗುಂದದಿಂದ ಆರಂಭವಾಗಲಿದ್ದು, ಜೆಡಿಎಸ್ ವರಿಷ್ಠ ದೇವೇಗೌಡ ಅವರು ಈ ಸಮಾವೇಶ ಉದ್ಘಾಟನೆ ಮಾಡಲಿದ್ದಾರೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ