ಹಳೇ ದ್ವೇಷ: ಯುವಕನಿಗೆ ಮಚ್ಚಿನೇಟು..

Kannada News

31-10-2017

ಬೆಂಗಳೂರು: ಯಲಹಂಕ ಉಪನಗರದ ಅಟ್ಟೂರು ಲೇಔಟ್‍ ನಲ್ಲಿ ಮಂಗಳವಾರ ಬೆಳಿಗ್ಗೆ ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಯಿಂದ ಮುಖ ದೇಹದ ಇನ್ನಿತರ ಭಾಗಗಳಿಗೆ ಗಾಯಗೊಂಡಿರುವ ಕನಕಪುರ ಮೂಲದ ಪ್ರಭು (28)ಎಂಬಾತನನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು ಆತನ ಸ್ಥಿತಿ ಗಂಭೀರವಾಗಿದೆ.

ಅಟ್ಟೂರು ಲೇಔಟ್ ಬಳಿ, ಬೆಳಿಗ್ಗೆ 7ರ ವೇಳೆ ಹಲ್ಲೆಯಿಂದ ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದ ಪ್ರಭುವನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ