'ರ‍್ಯಾಲಿ ಯಶಸ್ವಿಗೊಳಿಸಿ’- ಸಾಯಿಕುಮಾರ್

Kannada News

02-11-2017

ಚಿಕ್ಕಬಳ್ಳಾಪುರ: ರಾಜ್ಯದಾದ್ಯಂತ ಇಂದು ನಡೆಯಲಿರುವ ಬಿಜೆಪಿ ಪಕ್ಷದ ಪರಿವರ್ತನಾ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಮುಖಂಡ ಹಾಗೂ ಚಲನಚಿತ್ರ ನಟ ಸಾಯಿಕುಮಾರ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಗುಡಿಬಂಡೆ ಪಟ್ಟಣದ ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 72 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಚಾಲನೆ ನೀಡಲಿದ್ದು, ಈ ಸಮಾವೇಶದಲ್ಲಿ ಅನೇಕ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಗುಡಿಬಂಡೆಯಿಂದ ಸುಮಾರು 250 ರಿಂದ 300 ಬೈಕ್‌ ಗಳಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಬೈಕ್‌ ಗಳನ್ನು ತೆಗದುಕೊಂಡು ಬರುವಂತಹ ಕಾರ್ಯಕರ್ತರು ಸಾರಿಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಈ ರ‍್ಯಾಲಿ ನಡೆಯಲಿದ್ದು, ಪಕ್ಷ ಬಲಪಡಿಸುವುದು ಈ ರ‍್ಯಾಲಿಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಈ ರ‍್ಯಾಲಿಯನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ