ಸಾವಿನ ಹೊಂಡ..

Kannada News

02-11-2017

ರಾಯಚೂರು: ನೀರಿನ ಹೊಂಡದಲ್ಲಿ ಬಿದ್ದು ಬಾಲಕನೊರ್ವ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಗುಡಿಹಾಳ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಗುಡಿಹಾಳ ಗ್ರಾಮದ ರಾಜಪ್ಪ( 13) ಮೃತ ಬಾಲಕ. ಹೊಲವೊಂದರ ಒಡ್ಡು ನಿರ್ಮಾಣಕ್ಕಾಗಿ ತೋಡಿದ್ದ ಗುಂಡಿಯಲ್ಲಿ, ಸಂಗ್ರಹಿದ್ದ ನೀರಿನಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದಾಗ, ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಬಾಲಕನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಲಿಂಗಸನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ