ಬಿಜೆಪಿ ಪರಿವರ್ತನಾ ಯಾತ್ರೆ ಶುರು..

Kannada News

02-11-2017

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟದ ರಣಕಹಳೆ ಮೊಳಗಿಸಿರುವ ಬಿಜೆಪಿಯ 'ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಗೆ' ಚಾಲನೆ ನೀಡಿದೆ. ಜನವರಿ 28ರವರೆಗೆ ನಡೆಯುವ ಯಾತ್ರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಚಾಲನೆ ನೀಡಿದರು.

ಬಿಜೆಪಿ ನಡೆಯುತ್ತಿರುವ ಈ ಪರಿವರ್ತನಾ ಯಾತ್ರೆ ರಾಜ್ಯ ರಾಜಕಾರಣದ ಮಟ್ಟಿಗೆ ಇದೊಂದು ಐತಿಹಾಸಿಕ ಯಾತ್ರೆಯಾಗಲಿದ್ದು, ದಾಖಲೆ ಮೆರೆಯಲಿದೆ. ಸುಮಾರು 75 ದಿನಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಹಲವು ಮುಖಂಡರು ಅಂದಾಜು 7,500 ಕಿ.ಮೀ ಗಳನ್ನು ಕ್ರಮಿಸುವ ಗುರಿ ಹೊಂದಲಾಗಿದೆ.  ನಗರದ ಹೊರವಲಯದಲ್ಲಿನ ತುಮಕೂರು ರಸ್ತೆಯಲ್ಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ಬೃಹತ್ ಉದ್ಘಾಟನಾ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಯಾತ್ರೆಗೆ ಚಾಲನೆ ನೀಡಿದರು.

ಅಮಿತ್ ಷಾ ಅವರೊಂದಿಗೆ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ-ಸಹ ಉಸ್ತವಾರಿಗಳೂ ಸೇರಿದಂತೆ ರಾಜ್ಯದ ಎಲ್ಲಾ ಹಿರಿಯ ನಾಯಕರೂ ಉಪಸ್ಥಿತರಿದ್ದರು. ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮತಯಾಚನೆ ಮಾಡುವುದೇ ಈ ಯಾತ್ರೆಯ ಮುಖ್ಯ ಉದ್ದೇಶವಾಗಿದ್ದು, ರಾಜ್ಯ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳನ್ನೂ ಒಳಗೊಳ್ಳಲಾಗುತ್ತದೆ. ಬಿ.ಎಸ್. ಯಡಿಯೂರಪ್ಪ ಅವರು ಮೊದಲ ದಿನದಿಂದ ಕೊನೆಯ ದಿನದವರೆಗೂ ಪ್ರವಾಸ ನಡೆಸಲು ತೀರ್ಮಾನಿಸಿದ್ದು, ಇತರೆ ಪ್ರಮುಖ ನಾಯಕರು ಆಯಾ ಭಾಗಗಳಲ್ಲಿ ಪಾಲ್ಗೊಳ್ಳಲಿದ್ದಾರೆಂದು ಎಂದು ತಿಳಿದುಬಂದಿದೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ರಣಕಹಳೆ ಐತಿಹಾಸಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ