ರೈತರಿಗೆ ಟಿ.ಬಿ.ಜಯಚಂದ್ರ ಕಿವಿಮಾತು

Kannada News

02-11-2017

ತುಮಕೂರು: ಕೃಷಿಯೊಂದಿಗೆ ಹೈನುಗಾರಿಕೆಯನ್ನು ಅಳವಡಿಸಿಕೊಂಡರೆ ಅರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು, ಕಾನೂನು ಸಚಿವ ಟಿ.ಬಿ ಜಯಚಂದ್ರ ರೈತರಿಗೆ ಕರೆ ನೀಡಿದರು. ತಾಲ್ಲೂಕಿನ ಕೋರಾ ಹೋಬಳಿಯ ಚಿಕ್ಕಗುಂಡಗಲ್ಲು ಗ್ರಾಮದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ತುಮಕೂರು ಹಾಲು ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ 13ನೇ ಸುತ್ತಿನ ರಾಷ್ಟ್ರೀಯ ಕಾಲು-ಬಾಯಿ ಜ್ವರ ನಿಯಂತ್ರಣ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ರಾಸುಗಳಿಗೆ ಚಿಕಿತ್ಸೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರೈತರು ಬರೀ ಕೃಷಿ ನಂಬಿ ಬದುಕುವ ಬದಲು ಕೃಷಿಯೊಂದಿಗೆ ಹೈನು ಉದ್ಯಮವನ್ನು ಮಾಡಿದಾಗ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಸಣ್ಣ ರೈತರು ತಮ್ಮ ಹೊಲದಲ್ಲಿಯೇ ಮೇವನ್ನು ಬೆಳೆಯುವ ಮೂಲಕ ಹೈನು ಉದ್ಯಮ ಮಾಡಬೇಕು, ಹೆಚ್ಚು ಹಾಲು ಕರೆಯುವಂತಹ ಹಸುಗಳನ್ನು ಕಟ್ಟಿಕೊಂಡು ಹಾಲು ಉತ್ಪಾದನೆ ಮಾಡುವ ಮೂಲಕ ಕುಟುಂಬದ ವಾರ್ಷಿಕ ವರಮಾನವನ್ನು ಹೆಚ್ಚಿಸ ಬೇಕು ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ