ಬಸ್ ಪಲ್ಟಿ: ಓರ್ವ ಸಾವು

Kannada News

03-11-2017

ಧಾರವಾಡ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಒಂದು ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ‌ಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ಪ್ರಭುನಗರ ಹೊನ್ನಾಪುರ ಬಳಿ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬೆಂಗಳೂರಿನಿಂದ ಗೋವಾ ಗೆ ಹೊರಟಿದ್ದ ಪ್ರವಾಸಿ ಬಸ್ ನಲ್ಲಿ ಸುಮಾರು 50 ಜನ ಪ್ರಯಾಣ ಮಾಡುತ್ತಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.  ಈ ಸಂಬಂಧ ಗ್ರಾಮಾಂತರ‌ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಬಸ್ ಪಲ್ಟಿ ಧಾರವಾಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ