ಮತ್ತೆ ಪ್ರತಿಭಟನೆಗಿಳಿದ ವೈದ್ಯರು..

Kannada News

03-11-2017

ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ಮುಷ್ಕರ ಆರಂಭಿಸಿದ್ದಾರೆ. ಕಳೆದ ಜುಲೈನಲ್ಲಿ ಮುಷ್ಕರಕ್ಕೆ ಇಳಿದಿದ್ದ ವೈದ್ಯರು ಈಗ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ, ಇದರಿಂದ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ವ್ಯತ್ಯಯವಾಗಿದೆ.

ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಹೊರಟ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸಿದ್ದರು, ಇದೀಗ ಮತ್ತೆ ಮಸೂದೆ ಮಂಡನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಚಿಕ್ಕ ಕ್ಲಿನಿಕ್‍ ನಿಂದ ಹಿಡಿದು ಕಾರ್ಪೊರೇಟ್ ಆಸ್ಪತ್ರೆಗಳು  ಬಂದ್ ಆಗಿವೆ ಒಪಿಡಿ, ಒಟಿ ಸಂಪೂರ್ಣ ಸ್ಥಗಿತವಾಗಿವೆ.ಕೇವಲ ಆಕ್ಸಿಡೆಂಟ್ ಹಾಗೂ ಗರ್ಭಿಣಿಯರ ಕೇಸ್ ಮಾತ್ರ ಆಟೆಂಡ್ ಮಾಡೋದಾಗಿ ವೈದ್ಯರು ಹೇಳಿದ್ದಾರೆ.

ಚಿಕಿತ್ಸೆ ವಿಫಲವಾದರೆ, ವೈದ್ಯರನ್ನು ಜೈಲಿಗಟ್ಟುವ ಕಾಯ್ದೆ ಹಾಗೂ ದಂಡ ಪ್ರಯೋಗಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲಾಮಟ್ಟದಲ್ಲಿ ಕುಂದು ಕೊರತೆ ಪರಿಹಾರ ಸಮಿತಿ ಸ್ಥಾಪನೆಗೂ ವೈದ್ಯರ ವಿರೋಧವಿದೆ. ಅದಲ್ಲದೇ ಚಿಕಿತ್ಸಾ ದರವನ್ನು ಸರ್ಕಾರವೇ ನಿಗಧಿ ಮಾಡುವ ನಿರ್ಧಾರ – ಈ ಎಲ್ಲಾ ನೀತಿಗಳ ವಿರುದ್ಧ ನಾವು ಮುಷ್ಕರ ಮಾಡುತ್ತೇವೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಡಾ.ರವೀಂದ್ರ ತಿಳಿಸಿದ್ದಾರೆ.

ವೈದ್ಯರ ಪ್ರತಿಭಟನೆ ಕುರಿತಂತೆ ಮಾತಾನಾಡಿದ ಸಿಎಂ ಸಿದ್ದರಾಮಯ್ಯ, ವೈದ್ಯರು ಮುಷ್ಕರ ಮಾಡೋದು ಸರಿಯಲ್ಲ. ಈಗಾಗಲೇ ಅವರ ಜೊತೆ ಮಾತನಾಡಿದ್ದೇವೆ, ಮುಷ್ಕರ ಮಾಡೋದು ಸರಿಯಾದ ಕ್ರಮವಲ್ಲ, ಅವಶ್ಯಕತೆ ಇದ್ದರೆ ಮತ್ತೊಂದು ಸಾರಿ ವೈದ್ಯರ ಜೊತೆ ಮಾತನಾಡುತ್ತೇನೆ. ಬಡವರಿಗೆ ಅನುಕೂಲವಾಗಲಿ ಎಂದು ತಿದ್ದುಪಡಿ ಮಸೂದೆ ತರಲಾಗುತ್ತಿದೆ. ಆದ್ದರಿಂದ ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಮುಷ್ಕರ ವೈದ್ಯಕೀಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ