ತಪ್ಪಿಸಿಕೊಂಡು ಓಡಿದ ಮರಳು ದಂಧೆಕೋರರು..

Kannada News

03-11-2017

ಹಾವೇರಿ: ಹಾವೇರಿ ಜಿಲ್ಲೆಯ, ಹರಳಹಳ್ಳಿ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಣಿಕೆ ಮಾಡುತ್ತಿದ್ದ ಅಡ್ಡೆ ಮೇಲೆ ತಹಸೀಲ್ದಾರ್ ಜೆ.ಬಿ.ಮಜ್ಜಗಿ ಮತ್ತು ಗುತ್ತಲ ಠಾಣೆ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ.

ದಾಳಿಗೆ ಮುಂದಾಗುತ್ತಿದ್ದಂತೆ ಪೊಲೀಸರು ಮತ್ತು ತಹಶೀಲ್ದಾರರನ್ನು ಕಂಡ ಅಕ್ರಮ ಮರಳು ದಂಧೆಕೋರರು, ಮರಳು ಮತ್ತು ನದಿಯಲ್ಲಿ ಮರಳು ತೆಗೆಯಲು ಬಳಸುತ್ತಿದ್ದ ತೆಪ್ಪಗಳನ್ನು ಬಿಟ್ಟು ಓಡಿ ಹೋಗಿದ್ದಾರೆ. ಇನ್ನು ಸ್ಥಳದಲ್ಲೇ ಬಿಟ್ಟುಹೋಗಿದ್ದ ಮರಳು ಸಾಕಾಣಿಗೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಅಕ್ರಮ ಮರಳು ದಂಧೆ ನಡೆಸುತ್ತಿರುವ ಖಚಿತ ಮಾಹಿತ ಪಡೆದ ಪೊಲೀಸರು ಮತ್ತು ತಹಸೀಲ್ದಾರ್ ಅವರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ತಪ್ಪಿಸಿಕೊಂಡು ಹೋಗಿರುವವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಮರಳು ದಂಧೆ ಕೋರರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಹಾವೇರಿ ಮರಳು ದಂಧೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ