ಮಹಿಳೆ ಸಾವು: ಓಡಿ ಹೋದ ಬಸ್ ಡ್ರೈವರ್

Kannada News

03-11-2017

ಗದಗ: ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಒಂದು, ಮಹಿಳೆ ಮೇಲೆ ಹರಿದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆಯು, ಗದಗ್ ನಲ್ಲಿ ನಡೆದಿದೆ. ಸುಶೀಲಮ್ಮ ಕುಲಕರ್ಣಿ (56)ಎಂದು ಮೃತ ಮಹಿಳೆಯನ್ನು ಗುರುತಿಸಲಾಗಿದೆ. ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಸೂರಣಗಿ ಬಸ್ ನಿಲ್ದಾಣದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಲಕ್ಷ್ಮೇಶ್ವರದಿಂದ ಗುತ್ತಲಕ್ಕೆ ಹೊರಟಿದ್ದ ಬಸ್, ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದು, ಪೊಲೀಸರು ಬಸ್ ಚಾಲಕನ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಶಿರಹಟ್ಟಿ ಸಾರಿಗೆ ಸಂಸ್ಥೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ