'ರೋಗಿಗಳು ಏನ್ ತಪ್ಪು ಮಾಡಿದ್ರು'..?

Kannada News

03-11-2017

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳನ್ನು ಸರಿ ಮಾಡೋದಕ್ಕೆ ನಿಮಗೆ ತಾಕತ್ತಿಲ್ಲ, ಆದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ತರೋದಕ್ಕೆ ಹೊರಟಿದ್ದಾರೆ ಎಂದು, ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಸರ್ಕಾರಿ ಆಸ್ಪತ್ರೆಗಳನ್ನು ಸರಿ ಮಾಡಲಿ ಎಂದು ಆಗ್ರಹಿಸಿದ್ದಾರೆ. ಸಚಿವ ರಮೇಶ್ ಕುಮಾರ್ ಮೇಲೆ ಇದು ಮೂರನೇ ಬಾರಿ ಪ್ರತಿಭಟನೆ ನಡೆಯುತ್ತಿರೋದು, ಆದರೂ ಸರ್ಕಾರ ಮತ್ತು  ಆರೋಗ್ಯ ಸಚಿವರು ಈ ಬಗ್ಗೆ ಗಮನಹರಿಸುತ್ತಿಲ್ಲ, ಸರ್ಕಾರ ಮತ್ತು ಖಾಸಗಿ ವೈದ್ಯರ ಹಗ್ಗ-ಜಗ್ಗಾಟದಿಂದ, ಆಗಾಗ ವೈದ್ಯಕೀಯ ಸೌಲಭ್ಯ ಸಿಗದೆ ನರಳುತ್ತಿರುವ ರೋಗಿಗಳು ಏನ್ ತಪ್ಪು ಮಾಡಿದ್ರು..? ಎಂದು ಪ್ರಶ್ನಿಸಿದ್ದಾರೆ. ಇದು ಸರ್ಕಾರದ ಬೇಜವಾಬ್ದಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ