'ವಿಧೇಯಕಕ್ಕೂ ಮುಷ್ಕರಕ್ಕೂ ಸಂಬಂಧವಿಲ್ಲ'

Kannada News

03-11-2017 391

ಬೆಂಗಳೂರು: ಖಾಸಗಿ ಆಸ್ಪತ್ರೆ ವೈದ್ಯರು ನಡೆಸುತ್ತಿರುವ ಮುಷ್ಕರ, ವಿಧೇಯಕಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಏಕೆ ಮುಷ್ಕರ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ ಎಂದು ಆರೋಗ್ಯ ಸಚಿವ ರಮೇಶ್‍ಕುಮಾರ್ ಹೇಳಿದರು. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ಮಾಡಲು ಪ್ರತಿಯೊಬ್ಬರಿಗೂ ಸ್ವಾತಂತ್ರ್ಯವಿದೆ. ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ಸರ್ಕಾರದ ಜೊತೆ ಅವರು ಯಾವುದೇ ಮಾತುಕತೆ ನಡೆಸಿಲ್ಲ. ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕಕ್ಕೂ ಮುನ್ನ ಅವರ ಅಭಿಪ್ರಾಯವನ್ನು ನಾವು ಆಲಿಸಿದ್ದೇವೆ. ಆದರೆ, ಈಗ ಅವರು ಮುಷ್ಕರಕ್ಕೆ ಮುಂದಾಗಿದ್ದಾರೆ. ಅವರು ನಡೆಸುತ್ತಿರುವ ಮುಷ್ಕರಕ್ಕೂ, ನಮಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳಿವೆ. ಸಾರ್ವಜನಿಕರು ಆ ಸೌಲಭ್ಯಗಳನ್ನು ಮುಕ್ತವಾಗಿ ಬಳಸಿಕೊಳ್ಳಬಹುದು. ಸರ್ಕಾರ ಉಚಿತವಾಗಿ ಆರೋಗ್ಯ ಸೇವೆ ನೀಡುತ್ತಿದೆ. ಅಲ್ಲದೆ, ಹೈಟೆಕ್ ಸೌಲಭ್ಯಗಳನ್ನು ಕೂಡ ಒದಗಿಸುತ್ತಿದೆ ಎಂದು ಅವರು ಹೇಳಿದರು.

 ಸಂಬಂಧಿತ ಟ್ಯಾಗ್ಗಳು

Kannada News Karnataka ವಿಧೇಯಕ ಆರೋಗ್ಯ ಸಚಿವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ