‘ಜೆಡಿಎಸ್ ಕಿಂಗ್ ಮೇಕರ್ ಅಲ್ಲ...ಕಿಂಗ್'

Kannada News

03-11-2017

ಚಿಕ್ಕಮಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಿಂಗ್ ಮೇಕರ್ ಆಗುವುದಿಲ್ಲ, ಕಿಂಗ್ ಆಗಲಿದೆ ಎಂದು ಕಡೂರು ಶಾಸಕ ವೈ.ಎಸ್.ವಿ.ದತ್ತ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬಗ್ಗೆ ತಿರಸ್ಕಾರ ಮನೋಭಾವ ಬಂದಿದೆ. ಆದರೆ ರಾಜ್ಯದಲ್ಲಿ ಜೆಡಿಎಸ್ ಪರವಾದ ಅಲೆ ಇದ್ದು, ಮತದಾರರು ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದರು.

ಈ ಬಾರಿ 110 ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಪ್ರಶ್ನೆಯೊಂದಕ್ಕೆ ಉತ್ತರಿಸಿದ ದತ್ತ, ಬೇರೆ ಪಕ್ಷದಿಂದ ಕರೆತಂದು ಚುನಾವಣೆಗೆ ನಿಲ್ಲಿಸುವ ದಿವಾಳಿತನಕ್ಕೆ ಪಕ್ಷ ತಲುಪಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಅಭ್ಯರ್ಥಿಗಳು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂದರು.

ಚುನಾವಣೆಯಲ್ಲಿ ಸಾಹಿತ್ಯಕ ಮತ್ತು ಸಂಘಟನಾತ್ಮಕವಾಗಿ ಜನರನ್ನು ತಲುಪುವ ಪ್ರಚಾರ ಮಾಡಲಿದ್ದೇವೆ. ಸಾಹಿತ್ಯ ಎಂದರೆ ದೇವೇಗೌಡರ ಆತ್ಮಚರಿತ್ರೆ. ಇದನ್ನು ನವೆಂಬರ್ ಕೊನೆ ವಾರದಲ್ಲಿ ಬಿಡುಗಡೆ ಮಾಡಲಿದ್ದು, ಇದರಲ್ಲಿ 3 ಭಾಗಗಳಿವೆ ಎಂದು ಹೇಳಿದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ