'ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಮೊದಲ ಸಭೆ' !

Kannada News

03-11-2017

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಪ್ರಚಾರ ಸಭೆಯನ್ನು ನವೆಂಬರ್ 7ರಂದು ಮೈಸೂರಿನಿಂದ ಆರಂಭಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ನ.7ರಂದು ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ನಂತರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಮೊದಲ ಸಭೆ ನಡೆಸಲಾಗುವುದು ಎಂದರು.

ಇದಕ್ಕೂ ಮೊದಲು ಕಾರ್ಯಕರ್ತರ ಸಭೆ ನಡೆಸಲು ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿತ್ತು. ಆದರೆ ಪಕ್ಷದ ಶಾಸಕರಾದ ಚಿಕ್ಕಮಾದು ಅವರು ಅಕಾಲಿಕ ನಿಧನ ಹೊಂದಿದ ಹಿನ್ನೆಲೆಯಲ್ಲಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ನ.7ರಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆಯ ನಂತರ ಚುನಾವಣಾ ಪ್ರಚಾರಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಿರುವ ಕರ್ನಾಟಕ ವಿಕಾಸ ವಾಹಿನಿ ಬಸ್‍ನಲ್ಲಿ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಲಾಗುವುದು ಎಂದರು. ಕೆ.ಆರ್.ನಗರ, ಹಾಸನ, ಬೇಲೂರು ಮೂಲಕ ಚಿಕ್ಕಮಗಳೂರಿಗೆ ತೆರಳಿ ಅಂದು ಸಂಜೆ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಾಗುವುದು ಎಂದು ಹೇಳಿದರು. ಅಂದು ರಾತ್ರಿ ಚಿಕ್ಕಮಗಳೂರಿನ ಗ್ರಾಮವೊಂದರಲ್ಲಿ ವಾಸ್ತವ್ಯ ಹೂಡುವುದಾಗಿ ಹೇಳಿದ ಕುಮಾರಸ್ವಾಮಿ, ನ.8ರಂದಿ ತರಿಕೆರೆಯಲ್ಲಿ ಬಹಿರಂಗ ಸಭೆ ಮತ್ತು ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ ಶಾಸಕ ಮಧುಬಂಗಾರಪ್ಪ ನೇತೃತ್ವದಲ್ಲಿ ಕೈಗೊಂಡಿರುವ ಪಾದಯಾತ್ರೆ ಮುಕ್ತಾಯ ಸಮಾರಂಭ ಮತ್ತು ಬೃಹತ್ ಸಮಾವೇಶದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ