ಎಸ್ಐಟಿಗೆ ಅಕ್ರಮ ಅದಿರು ರಫ್ತು ಪ್ರಕರಣ..?

Kannada News

04-11-2017

ಬೆಂಗಳೂರು: ವಿಧಾನ ಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆ ರಾಜ್ಯದಲ್ಲಿನ ಹಿಂದಿನ ಭ್ರಷ್ಟಾಚಾರ ಪ್ರಕರಣಗಳಿಗೆ ಮರು ಜೀವ ಬರುತ್ತಿದ್ದು, ಈಗ ಅಕ್ರಮ ಅದಿರು ರಫ್ತು ಪ್ರಕರಣವು ವಿಶೇಷ ತನಿಖಾ ದಳದ ವ್ಯಾಪ್ತಿಗೆ ಹೋಗುವ ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕ ಹಾಗೂ ತಮಿಳುನಾಡಿನ ನಾನಾ ಬಂದರುಗಳ ಮೂಲಕ ಅಕ್ರಮವಾಗಿ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಪ್ರಕರಣವನ್ನು ಮುಚ್ಚಿಹಾಕುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈಗಾಗಲೇ ಎರಡು ಪ್ರಕರಣದಲ್ಲಿ ತನಿಖೆ ಅಸಾಧ್ಯ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸಭೆ ಸೇರಿದ ಸಂಪುಟ ಉಪ ಸಮಿತಿ, ಅಕ್ರಮ ಅದಿರು ರಫ್ತು ಪ್ರಕರಣವನ್ನು ಎಸ್ಐಟಿಗೆ ವಹಿಸಲು ಒಪ್ಪಿಗೆ ಸೂಚಿಸಿದೆ. ಈ ಸಂಬಂಧ ಮುಂದಿನ ಸಂಪುಟ ಸಭೆಯಲ್ಲಿ ಅಧಿಕೃತ ತೀರ್ಮಾನವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಅಕ್ರಮ ಅದಿರು ಸಿಬಿಐ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ