ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜು..

Kannada News

04-11-2017

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ಇಂದಿನಿಂದ ರಾಷ್ಟ್ರೀಯ ನಾಟಕೋತ್ಸವ ಹಾಗೂ ಶಿವಸಂಚಾರಕ್ಕೆ ಚಾಲನೆ ದೊರೆಯಲಿದ್ದು, ರಂಗಾಸಕ್ತರನ್ನು ಬರಮಾಡಿಕೊಳ್ಳಲು ಗ್ರಾಮ ನವ ವಧುವಿನಂತೆ ಸಿಂಗಾರಗೊಂಡಿದೆ.

ರಂಗಜಂಗಮ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ 6 ದಿನಗಳ ನಾಟಕೋತ್ಸವದಲ್ಲಿ ಕನ್ನಡ, ಮರಾಠಿ, ತಮಿಳು, ಮಲೆಯಾಳಿ ಸೇರಿ 12 ನಾಟಕಗಳು ಪ್ರದರ್ಶನಗೊಳ್ಳಲಿವೆ. ಶರಣ ಮೋಳಿಗೆ ಮಾರಯ್ಯನ ವಚನದಿಂದ ಆಯ್ದ ‘ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ’ ಧ್ಯೇಯ ವಾಕ್ಯದೊಂದಿಗೆ ಈ ಬಾರಿಯ ನಾಟಕೋತ್ಸವ ನಡೆಯಲಿದೆ. ಶಿವಸಂಚಾರಕ್ಕಾಗಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ರಚಿಸಿರುವ ಮೋಳಿಗೆ ಮಾರಯ್ಯ, ದ.ರಾ.ಬೇಂದ್ರೆ ರಚನೆಯ ಸಾಯೋ ಆಟ ಹಾಗೂ ಹಬೀಬ್ ತನ್ವೀರ್ ರಚಿಸಿ, ಪ್ರೊ.ಸಿದ್ದಲಿಂಗ ಪಟ್ಟಣಶೆಟ್ಟಿ ಅನುವಾದಿಸಿರುವ ಚೋರ ಚರಣ ದಾಸ ನಾಟಕ ಆಯ್ಕೆ ಮಾಡಿಕೊಳ್ಳಲಾಗಿದೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ನಾಟಕೋತ್ಸವ ಸಾಣೇಹಳ್ಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ