‘ಬೆಂಬಲ ನೋಡಿ ಸಿಎಂಗೆ ಸಹಿಸಲಾಗುತ್ತಿಲ್ಲ’

Kannada News

04-11-2017

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ, ನಮ್ಮದಲ್ಲ ಪಶ್ಚಾತ್ತಾಪ ರ‍್ಯಾಲಿ. ನಿಮಗೇ ಪಶ್ಚಾತ್ತಾಪ ಪ್ರಾರಂಭವಾಗಿದೆ, ಸಿದ್ಧರಾಗಿ, ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನರೇ ನಿಮಗೆ ಬುದ್ಧಿ ಕಲಿಸಲಿದ್ದಾರೆ ಎಂದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರು, ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದು, ನಂತರ ಮಾತನಾಡಿ, ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ರ‍್ಯಾಲಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಇದನ್ನು ಕಂಡು ಮುಖ್ಯ ಮಂತ್ರಿಗಳಿಗೆ ಸಹಿಸಲಾಗುತ್ತಿಲ್ಲ. ಮೊದಲು ತಮ್ಮ ನಡವಳಿಕೆ ಸರಿಮಾಡಿಕೊಳ್ಳಿ, ಆಮೇಲೆ ಬೇರೆಯವರಿಗೆ ಪಾಠ ಮಾಡಿ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಈಗಾಗಲೇ ಕುಣಿಗಲ್, ಚಿಕ್ಕನಾಯಕನಹಳ್ಳಿ, ತುರುವೇಕೆರೆಯಲ್ಲಿ ನಡೆದ ರ‍್ಯಾಲಿಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಇಲ್ಲಿ ದೊರೆತ ಜನ ಬೆಂಬಲ ನೋಡಿಯೇ ಸಿಎಂ ಅವರಿಗೆ ಸಹಿಸಲಾಗುತ್ತಿಲ್ಲ. ಇನ್ನು ರಾಜ್ಯಾದ್ಯಂತ ಬಿಜೆಪಿಗೆ ದೊರೆಯುವ ಬೆಂಬಲದಿಂದ ಅವರು ಆತಂಕಕ್ಕೆ ಒಳಗಾಗಿ, ಬಿಜೆಪಿಯವರದು ಪಶ್ಚಾತ್ತಾಪ ರ‍್ಯಾಲಿ ಎಂದು ಹೇಳಿಕೆ ನೀಡಿದ್ದಾರೆ ಎಂದು ಗುಡುಗಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ