‘ಕರಾಳ ಮಸೂದೆ ಪರ ರಾಜ್ಯ ಸರ್ಕಾರ’

Kannada News

04-11-2017

ತುಮಕೂರು: ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ, ಔಷಧಿ ಇಲ್ಲ, ನರ್ಸ್‍ಗಳಿಲ್ಲ. ಈ ಸಮಸ್ಯೆ ಸರಿಪಡಿಸದೆ ಖಾಸಗಿ ವೈದ್ಯರ ವಿರುದ್ಧ ಗದಾಪ್ರಹಾರ ಮಾಡುತ್ತಿರುವುದು ಸರಿಯಲ್ಲ ಎಂದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತುಮಕೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುತೇಕ ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳು ಇಂದಿಗೂ ಮರೀಚಿಕೆಯಾಗಿವೆ. ಮೊದಲು ಅದನ್ನು ಸರಿಪಡಿಸುವುದನ್ನು ಬಿಟ್ಟು ,ಖಾಸಗಿ ವೈದ್ಯರ ವಿರುದ್ಧ ಗದಾ ಪ್ರಹಾರ ಮಾಡುತ್ತ 'ಕರಾಳ ಮಸೂದೆ'ಯನ್ನು ಜಾರಿಗೆ ತರಲು ಹೊರಟಿದೆ ಎಂದು ಟೀಕಿಸಿದರು.

ಖಾಸಗಿ ವೈದ್ಯರು ಮೂರು ಬಾರಿ ಪ್ರತಿಭಟನೆ ನಡೆಸಿದರೂ ಅದನ್ನು ಸರಿಪಡಿಸುವ ಗೋಜಿಗೆ ಹೋಗದೆ, ಸಚಿವರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದರು. ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ಇಂದಿಗೂ ಜನರು ಪ್ಲೊರೈಡ್ ಯುಕ್ತ ನೀರು ಕುಡಿಯುತ್ತಿದ್ದಾರೆ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಫುಟ್‍ಪಾತ್ ಯೋಜನೆ ವಿಫಲವಾಗುತ್ತಿದೆ‌ ಎಂದು ಆಪಾದಿಸಿದರು.


ಸಂಬಂಧಿತ ಟ್ಯಾಗ್ಗಳು

Kannada News Karnataka ಗದಾಪ್ರಹಾರ ಬೇಜವಾಬ್ದಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ