ಸರಗಳ್ಳತನ: ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ !

Kannada News

06-11-2017

ಬೆಂಗಳೂರು: ನಗರದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಸರ ಅಪಹರಣ ನಡೆಯುತ್ತಲೇ ಇದ್ದು, ಆದಷ್ಟು ಬೇಗ ಸರಗಳ್ಳರನ್ನು ಬಂಧಿಸುವಂತೆ ನಗರ ಪೊಲೀಸ್ ಆಯುಕ್ತ ಸುನೀಲ್‍ ಕುಮಾರ್ ಎಲ್ಲಾ ಪೊಲೀಸ್ ಠಾಣೆಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸರಗಳ್ಳತನ ತಡೆಯಲು ಎಲ್ಲಾ ಕಡೆ ಗಸ್ತು ಹೆಚ್ಚಿಸುವಂತೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ನಗರದಲ್ಲಿ ನಾಕಾಬಂದಿ ಮಾಡಿ ಬೈಕ್‍ ಗಳ ತಪಾಸಣೆ ನಡೆಸುವಂತೆ ಅವರು ಸೂಚನೆ ನೀಡಿದ್ದು, ಈಗಾಗಲೇ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ನಗರದಲ್ಲಿ ಕಳೆದ 10 ದಿನದಲ್ಲಿ ವಿವಿಧ ಠಾಣೆಗಳಲ್ಲಿ 38 ಸರಗಳ್ಳತನ ಪ್ರಕರಣಗಳು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಆಯುಕ್ತ ಸುನೀಲ್‍ ಕುಮಾರ್, ಕಪ್ಪುಬಣ್ಣದ ಪಲ್ಸರ್ ಬೈಕ್‍ ಗಳಲ್ಲಿ ಸರಗಳ್ಳರು ಹೆಲ್ಮೆಟ್ ಧರಿಸಿಕೊಂಡು ಬಂದು ಸರ ಅಪಹರಿಸುತ್ತಿರುವುದು ವಿವಿಧ ಕಡೆಯ 20 ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಒಂದೇ ಗ್ಯಾಂಗ್‍ ನಿಂದ ಈ ಕೃತ್ಯ ನಡೆಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ಸರಗಳ್ಳರು ವೃದ್ಧೆಯರನ್ನೇ ಟಾರ್ಗೆಟ್ ಮಾಡಿಕೊಂಡು ಸರ ಅಪಹರಿಸುತ್ತಿದ್ದು, ಕೂಡಲೇ ಆಯಾ ಠಾಣಾ ವ್ಯಾಪ್ತಿಗಳಲ್ಲಿ ಗಸ್ತು ಹೆಚ್ಚಿಸಿ ಸರಗಳ್ಳರನ್ನು ಬಂಧಿಸುವಂತೆ ಪೊಲೀಸ್ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಸರಗಳ್ಳತನ ಟಾರ್ಗೆಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ