ಎಚ್ಚರ: ಸರ್ಕಾರಿ ಕೆಲಸ ಮತ್ತು ಮೋಸ...

Kannada News

06-11-2017

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುತ್ತೇನೆ ಎಂದು ನೂರಾರು ಜನರಿಂದ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ, ನಾನು ರೈಲ್ವೆ ಇಲಾಖೆಯ ಪ್ರಮುಖ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಹಣ ಕೊಟ್ಟರೆ ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಲಕ್ಷಾಂತರ ರೂ. ಹಣ ಪಡೆದಿದ್ದ. ಕೋಮಲಾ ಎಂಬಾಕೆಯಿಂದ 2.5 ಲಕ್ಷ ರೂ., ವೃದ್ದೆಯೊಬ್ಬರಿಂದ 7.5 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾನೆ.

ಮೋಸ ಹೋದವರು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ವಂಚನೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗ ಆರೋಪಿ ಅರುಣ್ ಕುಮಾರ್‍ ನನ್ನು ಬಂಧಿಸಿದ್ದಾರೆ. ಅರುಣ್ ತನ್ನ ವಂಚನೆಗೆ ಸುಂದರಿ ಹುಡುಗಿಯೊಬ್ಬಳನ್ನು ಬಳಸಿಕೊಂಡಿದ್ದ ಎಂಬ ಆರೋಪಗಳಿವೆ. ಯುವತಿಯನ್ನು ತನ್ನ ಹೆಂಡತಿ ಎಂದು ಹೇಳಿಕೊಂಡು ಆಕೆಯ ಮೂಲಕ ಹಣ ವಸೂಲಿ ಮಾಡುತ್ತಿದ್ದ ಎಂದು ವಂಚನೆಗೊಳಗಾದವರು ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಯುವತಿಯೂ ಕೂಡ ತಾನು ಅರುಣ್‍ ನನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಳು ಎನ್ನಲಾಗಿದೆ.

ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆ ರಾಗ ಬದಲಿಸಿದ ಯುವತಿ ತನಗೂ, ಅರುಣ್ಗೂ  ಯಾವುದೇ ಸಂಬಂಧ ಇಲ್ಲ ಎಂದು ಉಲ್ಟಾ ಹೊಡೆದಿದ್ದಾಳೆ. ಸದ್ಯ ಪೊಲೀಸರು ಆರೋಪಿ ಅರುಣ್‍ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಂಚನೆ ಪ್ರಕರಣದಲ್ಲಿ ಯುವತಿಯ ಪಾಲೆಷ್ಟು ಅಥವಾ ಯುವತಿ ಹೆಸರಿಗೆ ಕಳಂಕ ತರುವ ಪ್ರಯತ್ನ ನಡೆಯುತ್ತಿದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ರೈಲ್ವೆ ಇಲಾಖೆ ಹಣ ವಸೂಲಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ