ವಾಯುಭಾರ ಕುಸಿತ: ಚಳಿ ಚಳಿ..

Kannada News

06-11-2017

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಮತ್ತು ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ ಎಂದು, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಈಶಾನ್ಯದಿಂದ ತೇವಾಂಶ ಭರಿತ ಗಾಳಿ ಬೀಸುತ್ತಿರುವ ಪರಿಣಾಮ ರಾಜ್ಯದಲ್ಲಿ ಚಳಿಯ ಅನುಭವವಾಗುತ್ತಿದೆ. ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ತುಂತುರು ಮಳೆಯಾಗಿದೆ.

ಶೀತ ಗಾಳಿಯಿಂದ ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ ನಷ್ಟು ಉಷ್ಣಾಂಶ ಕಡಿಮೆಯಾಗಿದೆ. ರಾಜ್ಯದಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ವಾಯುಭಾರ ಕುಸಿತದ ಪ್ರಭಾವ ಚೆನ್ನೈನಲ್ಲೂ ಇನ್ನೆರಡು ದಿನಗಳಲ್ಲಿ ಮಳೆಯ ಅಬ್ಬರ ತಗ್ಗಲಿದ್ದು, ರಾಜ್ಯದಲ್ಲೂ ಚಳಿ ಕಡಿಮೆಯಾಗಲಿದೆ’ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Kannada News Karnataka ಬಂಗಾಳಕೊಲ್ಲಿ ವಾಯುಭಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ