ಮೃತ್ಯುಂಜಯ ಸ್ವಾಮಿ ಪ್ರತಿಕೃತಿ ದಹನ

Kannada News

06-11-2017

ವಿಜಯಪುರ: ಪ್ರಚೋದನಕಾರಿ ಹೇಳಿಕೆ ನೀಡಿದ ಬಸವ ಜಯ ಮೃತ್ಯುಂಜಯ ಸ್ವಾಮಿ ಪ್ರತಿಕೃತಿ ದಹಿಸಿ ವೀರಶೈವ ಮುಖಂಡರು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಿವಾದಿತ ಹೇಳಿಕೆ ನೀಡಿದ ಸ್ವಾಮಿಗಳು ವಿರುದ್ಧ, ನಗರದ ಸಿದ್ದೇಶ್ವರ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸಿದ ವೀರಶೈವ ಮುಖಂಡರು, ಮೃತ್ಯುಂಜಯ ಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಸ್ವಾಮಿಗಳ ಮೇಲೆ ಐಪಿಸಿ ಕಲಂ ಅಡಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇನ್ನು ಈ ಕುರಿತಂತೆ, ಕೂಡಲ ಸಂಗಮ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗೆ, ಬಸವಣ್ಣನೇ ಬುದ್ದಿ ಕೊಡಲಿ ಎಂದು, ವೀರಶೈವ ಮಹಾಸಭಾದ ಅಧ್ಯಕ್ಷ , ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಮೃತ್ಯುಂಜಯ ಸ್ವಾಮೀಜಿ ಬಸವಣ್ಣನೇ ದೇವರು ಎಂದು ಹೇಳುತ್ತಾರೆ. ಲಿಂಗಾಯತ ಹಾಗೂ ವೀರಶೈವರ ಕುರಿತು ಹೇಳಿಕೆ ನೀಡುವಾಗ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ಮುಖ್ಯ ಎಂದರು. ಇವರ ಹೇಳಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಮಹಂತೇಶ ಗಿರಿಮಠ ಎಂಬುವರು ದೂರು ನೀಡಿದ್ದಾರೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ