ಟಿಪ್ಪು ಜಯಂತಿ ವಿರೋಧ: ಕಾರು ಜಖಂ..?

Kannada News

06-11-2017

ಬೆಂಗಳೂರು: ಬೆಂಗಳೂರು ಗ್ರಾಮಾಂತರ ನೆಲಮಂಗಲದ ಮಾರುತಿ ನಗರದಲ್ಲಿ ನಿನ್ನೆ ಮಧ್ಯರಾತ್ರಿ ಸ್ಥಳೀಯ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷನ ಕಾರನ್ನು ದುಷ್ಕರ್ಮಿಗಳು ಜಖಂಗೊಳಿಸಿ ಪರಾರಿಯಾಗಿದ್ದಾರೆ. ಟಿಪ್ಪು ಜಯಂತಿ ವಿರೋಧಿಸಿ ಹೋರಾಟಕ್ಕೆ ಮುಂದಾಗಿದ್ದ ರಾಮ್ ಎಂಬುವರಿಗೆ ಸೇರಿದ ಕಾರು ಇದಾಗಿದೆ. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಸಫಾರಿ ಸ್ಟ್ರೋಮ್ ಕಾರಿನ ಹಿಂಭಾಗದ ಗ್ಲಾಸ್‍ನ್ನು ಕಲ್ಲಿನಿಂದ ಒಡೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಟಿಪ್ಪು ಜಯಂತಿ ವಿರೋಧಿಸುತ್ತಿರುವ ಹಿನ್ನೆಲೆ ಬೆದರಿಸುವ ಉದ್ದೇಶದಿಂದ ಯಾರೋ ಕಿಡಿಗೇಡಿಗಳು ಈ ರೀತಿ ಕೃತ್ಯವೆಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ನೆಲಮಂಗಲ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಟಿಪ್ಪು ಜಯಂತಿ ನೆಲಮಂಗಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ