ಟ್ರ್ಯಾಕ್ಟರ್ ಗೆ ವ್ಯಕ್ತಿ ಬಲಿ..

Kannada News

06-11-2017

ಬೆಂಗಳೂರು: ನಗರದ ಹೊರವಲಯದ ಕನಕಪುರ ರಸ್ತೆ ಬಳಿ, ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಕೋಡಿಹಳ್ಳಿಯ ಚಿಕ್ಕದುರ್ಗಯ್ಯ(38)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಕನಕಪುರದ ಏರಂಗೆರೆಯ ಬಳಿ ಬೈಕ್‍ನಲ್ಲಿ ನಿನ್ನೆ ರಾತ್ರಿ ಹೋಗುತ್ತಿದ್ದ ಚಿಕ್ಕದುರ್ಗಯ್ಯ ಅವರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೋಡಿಹಳ್ಳಿ ಪೊಲೀಸರು ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kannada News Karnataka ಟ್ರ್ಯಾಕ್ಟರ್ ಕನಕಪುರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ